fbpx
ಸಮಾಚಾರ

ಅಂದು BSY ಸಿಎಂ ಆದ್ರೇ ಅವರ ಮನೆ ಗೇಟ್ ಕಾಯುತ್ತೇನೆ ಎಂದಿದ್ದ ಜಮೀರ್ ಈಗ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲಿದ್ದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ವಿಶ್ವಾಸ ಕಳೆದುಕೊಂಡು ಅಧಿಕಾರದಿಂದ ಹೊರನಡೆದಿದೆ. ಇನ್ನೊಂದು ಕಡೆ ಹೊಸ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ಆರಂಭಿಸಿದೆ. ಬಿಎಸ್ ಯಡಿಯೂರಪ್ಪ ಸಿಎಂ ಆಗುವುದು ಬಹುತೇಕ ಪಕ್ಕಾ ಆಗಿದೆ. ಆದರೆ ಹಿಂದೊಮ್ಮೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ನೀಡಿದ್ದ ಹೇಳಿಕೆ ಈಗ ಅವರನ್ನು ಕಾಡಲು ಆರಂಭಿಸಿದೆ.

 

 

‘ಮೇ 23ರೊಳಗೆ ಯಡಿಯೂರಪ್ಪನವರು ಸಿಎಂ‌ ಆಗಬೇಕೆಂಬ ನನ್ನ ಸವಾಲನ್ನು ಸ್ವೀಕರಿಸಿ ಗೆದ್ದಿದ್ದರೆ 1 ದಿನವಲ್ಲ 1 ತಿಂಗಳು ಅವರ ಮನೆ ಗೇಟ್ ಕಾಯುತ್ತಿದ್ದೆ. ಇಷ್ಟೆಲ್ಲ ಕಸರತ್ತು ನಡೆಸಿ ಮುಖ್ಯಮಂತ್ರಿಯಾದರೂ ಎಷ್ಟು ದಿ‌ನ ಕುರ್ಚಿಯಲ್ಲಿರುತ್ತೀರಿ ಎನ್ನುವುದಕ್ಕೆ ಗ್ಯಾರಂಟಿ ಇದೆಯೇನ್ರಿ ಸಾಹೇಬರೇ! All the best!” ಎಂದು ಟ್ವೀಟ್ ಮಾಡುವ ಮೂಲಕ ಜಮೀರ್ ಅವರು ಬಿ.ಎಸ್ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.

ಕುಂದಗೋಳ ಉಪಚುನಾವಣೆ ಸಂದರ್ಭದಲ್ಲಿ ಮೇ 23ರೊಳಗೆ ಬಿಜೆಪಿ ಸರ್ಕಾರ ರಚಿಸಿದರೆ ಯಡಿಯೂರಪ್ಪನವರ ಮನೆ ಗೇಟ್ ಕಾಯುತ್ತೇನೆ ಎಂಬ ನನ್ನ ಸವಾಲನ್ನು‌ ಸ್ವೀಕರಿಸುವ ಧೈರ್ಯ ತೋರದ ಬಿಜೆಪಿ ನಾಯಕರು 2 ತಿಂಗಳ ನಂತರ ಹಳೆ ವಿಡಿಯೋವನ್ನು ಹರಿಬಿಟ್ಟು ವಿಕೃತಾನಂದ ಪಡುತ್ತಿದ್ದಾರೆ. ಅವರ ಬಗ್ಗೆ ನನಗೆ ಅನುಕಂಪ‌ ಇದೆ ಎಂದು ಜಮೀರ್ ಹೇಳಿದ್ದಾರೆ.

ಏನಿದು ಘಟನೆ:
ಯಡಿಯೂರಪ್ಪ ಸಿಎಂ ಆದರೆ ಸೆಕ್ಯೂರಿಟಿ ಗಾರ್ಡ್ ಆಗಿ ಅವರ ಮನೆ ಕಾಯುತ್ತೇನೆ ಎಂದು ಕುಂದಗೋಳ ಉಪಚುನಾವಣೆ ಸಂದರ್ಭದಲ್ಲಿ ಜಮೀರ್ ಹೇಳಿದ್ದರು. ಇದೀಗ ಬಿಜೆಪಿ ಸರಕಾರ ರಚನೆ ಮಾತುಗಳು ಕೇಳಿಬಂದಿರುವುದರಿಂದ ಸೋಶಿಯಲ್ ಮೀಡಿಯಾ ಜಮೀರ್ ಅವರನ್ನು ಅಣಕಿಸಿತ್ತು. ಇದಕ್ಕೆ ಉತ್ತರ ಎಂಬಂತೆ ಜಮೀರ್ ತಮ್ಮ ಮಾತನ್ನು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top