fbpx
ದೇವರು

ವರಮಹಾಲಕ್ಷ್ಮಿಯನ್ನು ಮುಂಜಾನೆ ಅಥವಾ ಸಂಜೆಯೇ ಏಕೆ ಪೂಜೆ ಮಾಡಬೇಕು ಗೊತ್ತಾ?

ವರಮಹಾಲಕ್ಷ್ಮಿ ವ್ರತ – ಹೆಸರೇ ಸೂಚಿಸುವಂತೆ ವರಗಳನ್ನು ಕೊಡುವ ಲಕ್ಷ್ಮಿ ದೇವಿಯ ವ್ರತ ಇದು. ಈ ವ್ರತವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಶುಕ್ರವಾರ ಮಾಡುತ್ತಾರೆ. ಪೂರ್ಣಿಮೆಯ ಹಿಂದಿನ ಶುಕ್ರವಾರ ಮಾಡಬೇಕು. ಕೆಲವರ ಮನೆಯಲ್ಲಿ ವ್ರತ ಮಾಡುವ ಪದ್ಧತಿಗೆ ಇರುತ್ತೆ, ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಲಕ್ಷ್ಮಿ ದೇವಿಗೆ ಪೂಜೆ ಮಾಡಲಾಗುತ್ತದೆ.

ಆದರೆ ವರಮಹಾಲಕ್ಷ್ಮಿಯನ್ನು ಮುಂಜಾನೆ ಅಥವಾ ಸಂಜೆಯೇ ಪೂಜಿಸಬೇಕು. ಶುಕ್ರವಾರ ಬೆಳಗ್ಗೆ ಬೆಳಗ್ಗೆ 6 ಗಂಟೆ ಒಳಗೆ ಅಥವಾ ಸಂಜೆ 6 ಗಂಟೆ ಸುಮಾರಿಗೆ ಪೂಜಿಸಬೇಕು. ಏಕೆಂದರೆ ಮಧ್ಯಾಹ್ನ 12 ಗಂಟೆಯಿಂದ ಸಂಜೆವರೆಗೂ ದುರ್ಗೆಯನ್ನು ಪೂಜಿಸುವ ಸಮಯ. ಈ ಸಮಯದಲ್ಲಿ ಲಕ್ಷ್ಮಿಯನ್ನು ಪೂಜಿಸುವುದು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ.

ಈ ದಿನ ಬೆಳಿಗ್ಗೆ ಎದ್ದು ಮಂಗಳಸ್ನಾನ ಮಾಡಬೇಕು. ವ್ರತ ಮಾಡುವವರು ಕಲಶ ಸ್ಥಾಪನೆ ಮಾಡಬೇಕು.ಪೂಜೆ ಮಾಡುವ ಸ್ಥಳವನ್ನು ಸ್ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗವಲ್ಲಿ ಹಾಕಬೇಕು. ಇದರಮೇಲೆಕಲಶಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿನದ ಗೊನೆ, ಅಡಿಕೆ, ಬೆಳ್ಳಿ ನಾಣ್ಯ / ಯಾವುದೇ ನಾಣ್ಯ(coin) ಹಾಕಿ. ಅದರಮೇಲೆ ಅರಿಶಿನ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಿ. ಕಳಶದ ಬಾಯಿಗೆ ವೀಳ್ಯದಎಲೆ, ಮಾವಿನ ಎಲೆಗಳನ್ನು ಇಡಬೇಕು. ಈ ಕಳಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನುಅಷ್ಟದಳರಂಗೋಲಿಯಮೇಲೆಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ಒಡವೆ ಹಾಕಿ ಅಲಂಕಾರ ಮಾಡಬಹುದು. ಈಕಲಶಕ್ಕೆ ಶ್ರೀಲಕ್ಷ್ಮಿಯನ್ನು ಆವಾಹನೆಮಾಡಿ, ಕಲಶವನ್ನುಪೂಜೆಮಾಡಬೇಕು.

ವರಮಹಾಲಕ್ಷ್ಮಿ ಕಲಶಸ್ಥಾಪನೆ:

ಷೋಡಶೋಪಚಾರದಿಂದ ಮಾಡುವ ಪೂಜಾ ವಿಧಿ ಇಲ್ಲಿದೆ.ಪೂಜಾಸಾಮಗ್ರಿಗಳಪಟ್ಟಿಇಲ್ಲಿದೆ. ಸಾಮನ್ಯವಾಗಿ ಉಪಯೋಗಿಸುವ ಪೂಜಾಸಾಮಗ್ರಿಗಳ ಜೊತೆಗೆ, 9 ಗಂಟಿನ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಈ ದಾರವನ್ನು ಕೈಗೆ ಕಟ್ಟಿಕೊಳ್ಳಬೇಕು. ಪೂಜಾ ವಿಧಾನ ಇಲ್ಲಿದೆ. ಗಣಪತಿ ಅಷ್ಟೋತ್ತರ ಇಲ್ಲಿದೆ. ವಿನಾಯಕನಿಗೆ ಪೂಜೆ ಮಾಡಿ ನಂತರ ವರಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ.ಪೂಜೆಯ ನಂತರ ಕಥಾ ಶ್ರವಣ ಮಾಡಬೇಕು. ಸುಮಂಗಲಿಯರಿಗೆ ಅರಿಶಿನ ಕುಂಕುಮ ಕೊಡಬೇಕು.
ಪೂಜೆಯ ಮಾರನೆಯ ದಿನ ಶನಿವಾರ, ದೇವರ ವಿಸರ್ಜನೆ ಮಾಡಿ, ನಂತರ ಕಲಶ ಪಾತ್ರೆಯ ಅಕ್ಕಿಯನ್ನು ಅಡಿಗೆಯಲ್ಲಿ ಉಪಯೋಗಿಸಿ, ಕಲಶಕ್ಕೆ ಇಟ್ಟ ತೆಂಗಿನಕಾಯಿಯಿಂದ ಸಿಹಿ ತಿಂಡಿಯನ್ನು ಮಾಡಿ. ವ್ರತದ ದಿನ ಪೂಜೆ ಮಾಡಲು ಆಗದಿದ್ದರೆ, ಶ್ರಾವಣದಲ್ಲಿ ಇನ್ನೊಂದು ಶುಕ್ರವಾರ ಈ ವ್ರತ ಮಾಡಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top