fbpx
ಸಮಾಚಾರ

ಪ್ರವಾಹ ಪರಿಹಾರ ನಿಧಿಗೆ ಧರ್ಮಸ್ಥಳದಿಂದ 25 ಕೋಟಿ ನೆರವು.

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಸ್ಪಂದಿಸಿರುವ ಅನೇಕರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

ಇದೀಗ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗಡೆ ನೆರೆ ಸಂತ್ರಸ್ಥರಿಗೆ ನೆರೆವಿನ ಹಸ್ತ ನೀಡಿದ್ದಾರೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ರಾಜ್ಯದ ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋ.ರೂ ಹೆಗ್ಗಡೆಯವರು ಘೋಷಣೆ ಮಾಡಿದ್ದಾರೆ.

ಈ ಕುರಿತು ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ವೀರೇಂದ್ರ ಹೆಗ್ಗಡೆ, “ಪಶ್ಚಿಮಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ 2 ಕೋಟಿ ರೂಪಾಯಿ ಮೀಸಲಾಗಿರಿಸಿದ್ದು, ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ ಮಾಡಿ 2 ಲಕ್ಷ ಸದಸ್ಯರಿಗೆ ತರಬೇತಿ ನೀಡಲಾಗುವುದು” ಎಂದು ಹೇಳಿದರು. ಈ ಸಂದರ್ಭದಲ್ಲಿ ಹೇಮಾವತಿ ವಿ.ಹೆಗ್ಗಡೆ, ಶಾಸಕ ಹರೀಶ್ ಪೂಂಜ, ಡಾ.ಎಲ್.ಎಚ್. ಮಂಜುನಾಥ್ ಉಪಸ್ಥಿತರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top