fbpx
ಸಮಾಚಾರ

ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಗಲೆಂದು #TuluOfficialinKA_KL ಅಭಿಯಾನ!

ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಚೇದಕ್ಕೆ ಸೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಟ್ವೀಟರ್‌ ನಲ್ಲಿ ಅಭಿಯಾನ ಪ್ರಾರಂಭಗೊಂಡಿದೆ. ಈ ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ಈ ರೀತಿಯ ಆಂದೋಲನಗಳು ನಡೆದಿತ್ತು. ಇದೀಗ ತುಳು ಭಾಷಿಕರ ಈ ಹೋರಾಟಕ್ಕೆ ರಾಜ್ಯದ ಇತರ ಕಡೆಯಿಂದಲೂ ಭಾರೀ ಬೆಂಬಲ ವ್ಯಕ್ತವಾಗಿದೆ.

ದ್ರಾವಿಡ ಭಾಷೆಗಳಲ್ಲಿ ಪುರಾತನ ಭಾಷೆಯಾಗಿರುವ ತುಳುವನ್ನು ಸರ್ಕಾರಗಳು ಕಡೆಗಣಿಸಿವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಭಾಷೆಯಾಗಿರುವ ತುಳುವಿಗೆ ಇಲ್ಲಿಯವರೆಗೆ ಅಧಿಕೃತ ಸ್ಥಾನಮಾನ ಸಿಗಲಿಲ್ಲ. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳದ ಅಧಿಕೃತ ಭಾಷೆಯಾಗಿ ಮಾಡಬೇಕು ಮತ್ತು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ #TuluTo8thSchedule #TuluOfficialinKA_KL ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಈ ಅಭಿಯಾನಕ್ಕೆ ಸ್ಯಾಂಡಲ್‍ವುಡ್ ಪ್ರಮುಖರು, ರಾಜಕೀಯ ಗಣ್ಯರು ಸಾಥ್ ನೀಡುತ್ತಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ, ನಟರಾದ ಜಗ್ಗೇಶ್, ನಿರೂಪ್ ಭಂಡಾರಿ, ರಕ್ಷಿತ್ ಶೆಟ್ಟಿ ಕಲಾವಿದ ವಿಲಾಸ್ ನಾಯಕ್, ರಾಜಕೀಯ ಪ್ರಮುಖರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರಮೋದ್ ಮಧ್ವರಾಜ್ ಸೇರಿದಂತೆ ಕರಾವಳಿ ಭಾಗದ ಜನರು ಟ್ವಿಟ್ಟರ್ ಅಭಿಯಾನದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top