fbpx
ಸಮಾಚಾರ

“ಸವದಿ ಬ್ಲೂಫಿಲಂ ನೋಡಿದ್ದರ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತನಾಡುವುದು ಸರಿಯೇ?” ಸಚಿವ ಮಾಧುಸ್ವಾಮಿ

ಲಕ್ಷ್ಮಣ ಸವದಿ ಅವರು ವಿಧಾನಸಭೆ ಕಲಾಪದಲ್ಲಿ ಬ್ಲೂಫಿಲಂ ನೋಡಿದ್ದನ್ನು ಮನುಷ್ಯತ್ವ ಇರುವವರು ಯಾರೂ ಒಪ್ಪಿಕೊಳ್ಳಲ್ಲ. ಒಂದು ತಪ್ಪಿಗೆ ಅನೇಕ ಬಾರಿ ಶಿಕ್ಷೆ ಕೊಡುವ ಕಾನೂನು ಎಲ್ಲೂ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಲಕ್ಷ್ಮಣ ಸವದಿ ಅವರನ್ನು ಸಮರ್ಥನೆ ಮಾಡಿಕೊಂಡಿಲ್ಲ. ಸಮರ್ಥನೆ ಮಾಡಿಕೊಳ್ಳುವ ಜಾಯಮಾನವೂ ನನ್ನದಲ್ಲ. ಅದೊಂದು ಆಕಸ್ಮಿಕ ಘಟನೆ. ಆಗಿದ್ದು ತಪ್ಪು, ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅದನ್ನೇ ಯಾಕೆ ಪದೇ ಪದೇ ಮಾತನಾಡುತ್ತಿದ್ದಾರೆ. ಸವದಿ ಬ್ಲೂಫಿಲಂ ನೋಡಿದ್ದರ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತನಾಡುವುದು ಸರಿಯೇ? ಸವದಿ ಅವರಿಗೆ ಶಿಕ್ಷೆಯಾಗಿದೆ. ಶಿಕ್ಷೆಯಾದ ಮೇಲೆ ಮಾಜಿ ಸಿಎಂ ಪದೇ ಪದೇ ಅದನ್ನೇ ಮಾತನಾಡುವುದು ಸರಿಯಲ್ಲ” ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಸೋತು ಮನೆ ಸೇರಿದ್ದ ಬ್ಲೂ ಬಾಯ್​ ಲಕ್ಷ್ಮಣ ಸವದಿಯನ್ನು ಬಿಜೆಪಿ ಸರ್ಕಾರ ಸಚಿವ ಸಂಪುಟದಲ್ಲಿ ಸೇರಿಸಿಕೊಂಡಿದ್ದಲ್ಲದೇ ಡಿಸಿಎಂ ಪಟ್ಟ ಕೂಡ ನೀಡಿರೋದೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಹಿಂದಿನ ಬಿಎಸ್​ವೈ ಸರ್ಕಾರದ ಅವಧಿಯಲ್ಲಿ ಲಕ್ಷ್ಮಣ ಸವದಿ ಮತ್ತು ಸಿಸಿ ಪಾಟೀಲ್ ಇಬ್ಬರೂ ವಿಧಾನಸೌಧದ ಅಧಿವೇಶನದ ವೇಳೆ ಅಶ್ಲೀಲ ವಿಡಿಯೋಗಳನ್ನ ನೋಡುತ್ತಿದ್ದುದು ದೊಡ್ಡ ಸುದ್ದಿಯಾಗಿ ಪ್ರಕರಣ ಕೂಡ ದಾಖಲಾಗಿತ್ತು. ಈಗ ಸವದಿ ಅವರು ಡಿಸಿಎಂ ಆದ ಬಳಿಕ ಸಿದ್ದರಾಮಯ್ಯ ಮತ್ತಿತರ ಕಾಂಗ್ರೆಸ್ ಮುಖಂಡರು ಲಕ್ಷ್ಮಣ ಸವದಿಯನ್ನು ಇದೇ ವಿಚಾರವಾಗಿ ಕಾಲೆಳೆಯುತ್ತಿರುವುದಕ್ಕೆ ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಈ ಮದ್ಯೆ ಸಚಿವ ಮಾಧುಸ್ವಾಮಿ ಸವದಿ ಪರ ಬ್ಯಾಟಿಂಗ್ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top