fbpx
ಸಮಾಚಾರ

ಹಿಂದಿ ಹೇರಿಕೆ ವಿರುದ್ಧ ತಿರುಗಿಬಿದ್ದ ಸೂಪರ್ ಸ್ಟಾರ್ ರಜಿನಿಕಾಂತ್ .

ದೇಶಕ್ಕೊಂದು ಅಧಿಕೃತ ಭಾಷೆ ಬೇಕು ಎನ್ನುವ ಮೂಲಕ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಭಿಪ್ರಾಯ, ಇದೀಗ ಭಾರೀ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಹಿಂದಿ ಭಾಷೆ ಉತ್ತೇಜನದ ವಿರುದ್ಧ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದವೇ ಕೆಂಡವಾಗಿದೆ.. ಈ ನಡುವೆ ಈಗ ಸೂಪರ್​ ಸ್ಟಾರ್​ ರಜನಿಕಾಂತ್​ ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದು, ಭಾರತದಂತಹ ರಾಷ್ಟ್ರಗಳಲ್ಲಿ ಏಕಭಾಷಾ ಸೂತ್ರ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

“ಯಾವ ಭಾಷೆಯನ್ನೂ ಒತ್ತಾಯದಿಂದ ಹೇರುವುದಕ್ಕೆ ಸಾಧ್ಯವಿಲ್ಲ. ದಕ್ಷಿಣ ಮತ್ತು ಉತ್ತರ ಭಾರತದ ರಾಜ್ಯಗಳು ದೇಶದಲ್ಲಿ ಒಂದೇ ಭಾಷೆ ಇರಬೇಕು ಎಂಬ ಸಿದ್ಧಾಂತವನ್ನು ಒಪ್ಪುವುದಿಲ್ಲ. ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಯೋಚಿಸಿದರೆ ಒಂದು ಸಾರ್ವತ್ರಿಕ ಬಹುಶಃ ಒಳ್ಳೆಯದು. ಆದರೆ ಭಾರತದಲ್ಲಿ ಹಾಗೆ ಮಾಡುವುದಕ್ಕಾಗುವುದಿಲ್ಲ. ಇಲ್ಲಿ ಬೇರೆ ಬೇರೆ ರಾಜ್ಯಗಳು ತಮ್ಮದೇ ಆದ ಭಾಷೆಯನ್ನು ಹೊಂದಿವೆ” ಎಂದು ರಜನಿಕಾಂತ್ ಹೇಳಿದ್ದಾರೆ.

ಮುಖ್ಯವಾಗಿ ಹಿಂದಿಯನ್ನು ಹೇರಿಕೆ ಮಾಡಲು ಯತ್ನಿಸಿದರೇ, ತಮಿಳುನಾಡಿನಲ್ಲಷ್ಟೇ ಅಲ್ಲ, ಯಾವುದೇ ದಕ್ಷಿಣದ ರಾಜ್ಯ ಇದನ್ನು ಒಪ್ಪಲ್ಲ. ಉತ್ತರದ ಹಲವಾರು ರಾಜ್ಯಗಳು ಇದನ್ನು ವಿರೋಧಿಸುತ್ತವೆ ಎಂದು ಹಿಂದಿ ಹೇರಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ ರಜನಿಕಾಂತ್.

ಈ ಹಿಂದೆ ನಟ, ರಾಜಕಾರಣಿ ಕಮಲ್ ಹಾಸನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದರು. “ಭಾರತ ಗಣರಾಜ್ಯವಾದಾಗ ವೈವಿಧ್ಯತೆಯಲ್ಲಿ ಏಕತೆ ಎಂಬ ಭರವಸೆ ನೀಡಲಾಗಿದೆ. ಶಾ, ಸುಲ್ತಾನ್ ಅಥವಾ ಯಾವುದೇ ಸಾಮ್ರಾಟ್‍ರಿಂದ ಆ ಭರವಸೆಯನ್ನು ಹಿಂಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top