fbpx
ಸಮಾಚಾರ

4 ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಬ್ ಬಚ್ಚನ್

ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಯಿಂದ ಶುಕ್ರವಾರ ರಾತ್ರಿ ಡಿಸ್ಚಾರ್ಜ್ ಮಾಡಲಾಗಿದೆ. ಶುಕ್ರವಾರ ರಾತ್ರಿ ಸುಮಾರು 9.45ಕ್ಕೆ ಅಮಿತಾಬ್ ಬಚ್ಚನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಮಿತಾಬ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಅವರ ಮಗ, ನಟ ಅಭಿಷೇಕ್ ಬಚ್ಚನ್ ಹಾಗೂ ಪತ್ನಿ ಜಯಾ ಬಚ್ಚನ್ ಜೊತೆಯಲ್ಲಿಯೇ ಇದ್ದರು.

 

 

ಹಿರಿಯ ನಟನನ್ನು ಮಂಗಳವಾರದಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಗುರುವಾರದಿಂದ ಹಲವಾರು ತಪಾಸಣೆ ನಡೆಸಲಾಗುತ್ತಿತ್ತು. ತಪಾಸಣೆಗಳು ಮುಗಿದ ಬಳಿಕ ಬಿಗ್ ಬಿ ಅವರನ್ನು ಶುಕ್ರವಾರ ಡಿಸ್ಚಾರ್ಜ್ ಮಾಡಲಾಯಿತು ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಹಿರಿಯ ನಟನನ್ನು ರೂಟೀನ್ ಚೆಕ್-ಅಪ್ ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿರುವ ಕಾರಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಅಮಿತಾಬ್ ಅವರ ಆರೋಗ್ಯದ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಲಿಲ್ಲ. ಆದರೆ ಅಮಿತಾಬ್ ಅವರೇ ಮಾಧ್ಯಮಗಳ ಮುಂದೆ ಆಸ್ಪತ್ರೆಗೆ ದಾಖಲಾಗಿದ್ದು ಏಕೆ ಎಂಬುದನ್ನು ಹೇಳುತ್ತಾರೆ ಎಂದು ಹೇಳಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top