fbpx
ಸಮಾಚಾರ

ರ‍್ಯಾಂಪ್ ವಾಕ್ ​ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು!

ಕಾಲೇಜಿನ ವೇದಿಕೆಯ ಮೇಲೆ ರ‍್ಯಾಂಪ್ ವಾಕ್​ ಪ್ರಾಕ್ಟೀಸ್ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದ ಪೀಣ್ಯ ಏಮ್ಸ್​ ಕಾಲೇಜಿನಲ್ಲಿ ಶುಕ್ರವಾರ ನಡೆದಿದ್ದು, ಶನಿವಾರ ವರದಿಯಾಗಿದೆ.

ಶಾಲಿನಿ(21) ಮೃತಪಟ್ಟ ವಿದ್ಯಾರ್ಥಿನಿ. ಕಾಲೇಜಿನಲ್ಲಿ ಪ್ರೆಶರ್ಸ್ ಡೇ ಪ್ರಯುಕ್ತ ರ‍್ಯಾಂಪ್ ವಾಕ್ ಅಭ್ಯಾಸ ನಡೆಸಲಾಗುತ್ತಿತ್ತು. ಆ ವೇಳೆ ರ‍್ಯಾಂಪ್ ವಾಕ್ ಮಾಡುತ್ತಿದ್ದ ಶಾಲಿನಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಶಾಲಿನಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸೋಮವಾರ ಕಾಲೇಜ್ ಫ್ರೆಶರ್ಸ್ ಡೇ ಇತ್ತು. ಈ ಹಿನ್ನೆಲೆಯಲ್ಲಿ ಶಾಲಿನಿ ಸೇರಿದಂತೆ ಕೆಲ ವಿದ್ಯಾರ್ಥಿಗಳು ರ‌್ಯಾಂಪ್‌ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ವೇಳೆ ಶಾಲಿನಿ ಸ್ಟೇಜ್ ಮೇಲೆಯೇ ಕುಸಿದು ಬಿದ್ದಿದ್ದಳು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ ಚಿಕಿತ್ಸೆ ಫಲಿಸದೆ ಶಾಲಿನಿ ಮೃತಪಟ್ಟಿದ್ದಾಳೆ.

ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರಿಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top