fbpx
ಸಮಾಚಾರ

ಬಾಕ್ಸ್ ಆಫೀಸ್‌ನಲ್ಲಿ ಒಂದೇ ದಿನ ಅವನೇ ಶ್ರೀಮನ್ನಾರಾಯಣ ಮತ್ತು ಪೊಗರು ಕಾದಾಟ!

ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ ಸಿನಿಮಾಗಳು ಒಂದೇ ದಿನ ತೆರೆಯಲ್ಲಿ ಮುಖಾಮುಖಿಯಾಗಲಿವೆ. ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ “ಅವನೇ ಶ್ರೀಮನ್ನಾರಾಯಣ” ಮತ್ತು ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರ ಒಂದೇ ದಿನ ತೆರೆಗೆ ಅಪ್ಪಳಿಸಲಿದೆ ಎಂದು ಹೇಳಲಾಗುತ್ತಿದೆ.

 

 

ಅವನೇ ಶ್ರೀಮನ್ನಾರಾಯಣ ಸಿನಿಮಾವನ್ನು ನವೆಂಬರ್ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆಯಾಗಿತ್ತು. ಆದರೆ ಈಗ ಬದಲಾದ ಯೋಜನೆಯ ಪ್ರಕಾರ ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆಯಾಗುತ್ತಿದೆ. ಈ ವಿಷಯವನ್ನು ಟ್ವಿಟರ್ ನಲ್ಲಿ ಸ್ವತಃ ರಕ್ಷಿತ್ ಶೆಟ್ಟಿ ಬಹಿರಂಗಪಡಿಸಿದ್ದಾರೆ. 2019 ರ ಡಿ.27 ರಕ್ಷಿತ್ ಶೆಟ್ಟಿ ಅವರ ಕಿರಿಕ್ ಪಾರ್ಟಿ ಸಿನಿಮಾ ಬಿಡುಗಡೆಯ 3 ನೇ ವಾರ್ಷಿಕೋತ್ಸವದ ದಿನವಾಗಲಿದೆ.

ಇನ್ನು ಪೊಗರು ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿಲ್ಲವಾದರೂ ಧ್ರುವ ಸರ್ಜಾ ತಮ್ಮ ಇತ್ತೀಚಿನ ಮಾಧ್ಯಮ ಸಂವಾದಗಳಲ್ಲಿ ಡಿ.27 ರಂದು ಬಿಡುಗಡೆಯಾಗುವ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ. ವರ್ಷಾಂತ್ಯಕ್ಕೆ ಬಿಡುಗಡೆ ಮಾಡುವ ಉದ್ದೇಶ ಚಿತ್ರ ತಂಡದಲ್ಲಿದ್ದು, ಈ ನಿಟ್ಟಿನಲ್ಲಿ ಕೆಲಸಗಳು ಭರದಿಂದ ಸಾಗಿವೆ.

ನಟಿ ರಶ್ಮಿಕಾ ಚಿತ್ರರಂಗಕ್ಕೇ ಎಂಟ್ರಿ ನೀಡಿದ್ದೇ ರಕ್ಷಿತ್ ನಟಿಸಿ, ನಿರ್ಮಿಸಿದ್ದ ‘ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ. ಆನಂತರ ತೆಲುಗು, ತಮಿಳು ಚಿತ್ರರಂಗದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈಗ ‘ಯಜಮಾನ’ದಲ್ಲಿ ದರ್ಶನ್ ಜೊತೆ ನಟಿಸಿದ್ದ ಅವರೀಗ ಧ್ರುವ ಜೊತೆ ‘ಪೊಗರು’ ತೋರಿಸಲು ಡಿ.27ಕ್ಕೆ ಬರುವುದು ನಿಕ್ಕಿಯಾದರೆ, ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್ ವರ್ಸಸ್ ರಶ್ಮಿಕಾ ಸ್ಪರ್ಧೆ ಏರ್ಪಡುವುದು ಖಚಿತ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top