fbpx
ಸಮಾಚಾರ

ಡಿಕೆಶಿಗೆ ಜಾಮೀನು ಮಂಜೂರು: ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಮಂಜೂರಾಗಿದೆ. ದೆಹಲಿ ಹೈಕೋರ್ಟಿನ ನ್ಯಾ.ಸುರೇಶ್ ಕುಮಾರ್ ಕೈಟ್ ಜಾಮೀನು ಆದೇಶವನ್ನು ಪ್ರಕಟಿಸಿದರು. ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಸುಮಾರು ಗುರುವಾರ (ಅಕ್ಟೋಬರ್ 17) 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾ. ಸುರೇಶ್ ಕುಮಾರ್ ಕೈಟ್ ಆದೇಶಿಸಿದ್ದಾರೆ.

 

 

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​​ಗೆ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್​ ಆದೇಶ ಹೊರಡಿಸಿದೆ. 25 ಲಕ್ಷ ರೂಪಾಯಿ ಶ್ಯೂರಿಟಿ ನೀಡುವಂತೆ ಹಾಗೂ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಅವರಿಗೆ ಜಾಮೀನು ದೊರೆತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ “ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ನನಗೆ ಸಂತೋಷ ಉಂಟುಮಾಡಿದೆ. ದ್ವೇಷ ರಾಜಕಾರಣದ ಉದ್ದೇಶದಿಂದ ಪ್ರಕರಣವು ತನಿಖಾ ಹಂತದಲ್ಲಿರುವಾಗಲೇ ಅವರನ್ನು ಬಂಧಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಲಾಗಿತ್ತು. ಅವರಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ದೊರೆತ ಜಯ.” ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top