fbpx
ಸಮಾಚಾರ

“ನಾವೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಿಸುತ್ತೇವೆ” ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಹೇಳಿಕೆ.

ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ. ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ. ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ಬಾರಿ ನನಗೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸಾಕಷ್ಟು ಜನ ಹೇಳಿದರು. ಆದರೆ, ಈ ಬಾರಿಯ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡುತ್ತೇವೆ ಎಂದು ಅವರು ತಿಳಿಸಿದರು.

ಹೊಸಕೋಟೆ ಉಪ ಚುನಾವಣೆ ಟಿಕೆಟ್​ ಆಕಾಂಕ್ಷಿಯಾಗಿರುವ ಶರತ್​ ಬಚ್ಚೇಗೌಡ, ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎನ್ನುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರು ಹರ್ಷ ವ್ಯಕ್ತಪಡಿಸಿದರು. ಸದ್ಯ ಟಿಕೆಟ್​ಗಾಗಿ ಪಕ್ಷದಲ್ಲಿ ಭಾರೀ ಪೈಪೋಟಿಯನ್ನು ಶರತ್​ ಬಚ್ಚೇಗೌಡ ಎದುರಿಸುತ್ತಿದ್ದು, ಚುನಾವಣಾ ಗೆಲುವಿಗಾಗಿ ಈಗ ಟಿಪ್ಪು ಜಯಂತಿ ಮೊರೆ ಹೋಗಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಮೇಲೆ ಕಣ್ಣೀಟ್ಟಿರುವ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಅಂದಹಾಗೆ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್​ ವಿರುದ್ಧ ಬಿಜೆಪಿಯಿಂದ ನಿಂತಿದ್ದ ಶರತ್ ಬಚ್ಚೇಗೌಡ ಕೇವಲ 5 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಕೊನೆಯ ಹಂತದವರೆಗೂ ಶರತ್​ ಬಚ್ಚೇಗೌಡ ಗೆಲ್ಲುತ್ತಾರೆಂದೇ ಭಾವಿಸಲಾಗಿತ್ತು. ಆದರೆ, ಕೊನೆಗೂ ಎಂಟಿಬಿ ನಾಗರಾಜ್ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದರು. ಹಾಗಾಗಿ ಈ ಭಾರಿ ಗೆಲುವಿನ ನಿರೀಕ್ಷೆಯಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top