fbpx
ಸಮಾಚಾರ

ಬೆಂಗಳೂರಲ್ಲಿ ನ.1ರಿಂದ ಕನ್ನಡ ನಾಮಫಲಕ: ಇಲ್ಲದಿದ್ದರೆ ಪರವಾನಗಿ ರದ್ದು!

ಅಂಗಡಿ ಮತ್ತಿತರ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಬಳಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದ್ರೆ ಈ ನಿಯಮವನ್ನು ಬಹುತೇಕ ಅಂಗಡಿಗಳ ಮಾಲೀಕರು ಪಾಲಿಸುತ್ತಿರಲಿಲ್ಲ. ಈಗ ವ್ಯಾಪಾರ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

 

 

ಒಂದು ವೇಳೆ ಕನ್ನಡ ಭಾಷೆಗೆ ನಾಮಫ‌ಲಕಗಳಲ್ಲಿ ಅಗ್ರಸ್ಥಾನ ನೀಡದಿದ್ದರೆ ಅಂತಹ ಮಳಿಗೆಗಳ ವಾಣಿಜ್ಯ ಪರವಾನಗಿಯನ್ನು ರದ್ದುಗೊಳಿಸ ಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಫಲಕಗಳಲ್ಲಿ ಕನ್ನಡ ಪದಗಳು ಸ್ಪಷ್ಟವಾಗಿ ಕಾಣುವಂತೆ ಮುದ್ರಿಸಬೇಕು ಎಂದು ಆಯುಕ್ತರು ಸ್ಪಷ್ಟ ಸೂಚನೆ ನೀಡಿದ್ದಾರೆ. ಜತೆಗೆ ಹೊಸದಾಗಿ ಪರವಾನಗಿ ಅರ್ಜಿ ಸಲ್ಲಿಸುವಂತಹ ಅರ್ಜಿದಾರರಿಗೂ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚನೆ.

ಈ ಹಿಂದೆಯೂ 2017 ರಲ್ಲಿ ಸುತ್ತೋಲೆ ಹೊರಡಿಸಿದ್ದ ಬಿಬಿಎಂಪಿ ನಾಮಫಲಕದಲ್ಲಿ ಶೇಕಡಾ 60 ರಷ್ಟು ಜಾಗವನ್ನು ಮೀಸಲಿರಿಸಬೇಕೆಂದು ತಿಳಿಸಿತ್ತು. ಆದರೆ ಕೆಲ ಅಂಗಡಿಗಳು ಇದನ್ನು ಪ್ರಶ್ನಿಸಿ ಕೋರ್ಟ್‌ಮೆಟ್ಟಿಲೇರಿದ್ದರು. ಆಗ ಸಂಸದ ಜಿಸಿ ಚಂದ್ರಶೇಖರ್ ಸೇರಿದಂತೆ ಅನೇಕರು ಕಡ್ಡಾಯ ಕನ್ನಡ ನಾಮಫಲಕಕ್ಕೆ ಒತ್ತಾಯಿಸಿದ್ದರು. ಆದರೆ ಇದೀಗ ಮತ್ತೆ ಬಿಬಿಎಂಪಿ ಕನ್ನಡ ಅಭಿಯಾನಕ್ಕೆ ಮುನ್ನುಡಿ ಬರೆಯಲು ಮುಂದಾಗಿದ್ದು ಇದಕ್ಕೆ ಅಂಗಡಿಕಾರರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top