fbpx
ಸಮಾಚಾರ

“ಬೈ ಎಲೆಕ್ಷನ್ ನಂತರ ಯಡಿಯೂರಪ್ಪ ರಾಜೀನಾಮೆ”

ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ. ಚುನಾವಣೆಯ ಬಳಿಕ ಯಡಿಯೂರಪ್ಪ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ. ಮುಂದೆ ಯಡಿಯೂರಪ್ಪ ರಾಜೀನಾಮೆ ಕೊಡುವ ಸಂದರ್ಭ ಬರಬಹುದು. ನಂತರ ಮಾರ್ಚ್ 2020ಕ್ಕೆ ಸಾರ್ವತ್ರಿಕ ಚುನಾವಣೆ ಬಂದರೂ ಆಶ್ಚರ್ಯವಿಲ್ಲ ಎಂದು ಸಾರ್ವತ್ರಿಕ ಚುನಾವಣೆ ಬರುವ ಬಗ್ಗೆ ಕೋಳಿವಾಡ ಭವಿಷ್ಯ ನುಡಿದರು.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ‌10 ಸ್ಥಾನ ಗೆಲ್ಲಲಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ ಈ‌ ಅನರ್ಹರ ಬಗ್ಗೆ ಈಗಾಗಲೇ ಕ್ಷೇತ್ರದಲ್ಲೂ ವಿರೋಧ ವ್ಯಕ್ತವಾಗಿದೆ. ಅನರ್ಹರ ವಿರುದ್ಧ ಜನರಿಂದ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಗೆಲ್ಲುವುದಿಲ್ಲ ಎಂದರು.

ಇನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ಕಾಂಗ್ರೆಸ್ ಪ್ರಭಾವಿ ನಾಯಕರು. ಇವರಿಬ್ಬರು ಭಿನ್ನಾಭಿಪ್ರಾಯ ಮರೆತು ಮುಂದೆ ಜೊತೆಗೂಡಿ ಹೋದರೆ ಕಾಂಗ್ರೆಸ್ ಗೆಲುವು ಶತಸಿದ್ಧ ಎಂದಿದ್ದಾರೆ. ಹಾಗೆಂದ ಮಾತ್ರಕ್ಕೆ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಅರ್ಥವಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top