fbpx
ಸಮಾಚಾರ

ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ 15 ಅನರ್ಹ ಶಾಸಕರು!

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.

ಭಾರತೀಯ ಜನತಾ ಪಾರ್ಟಿಯ ಬೆಂಬಲದಿಂದಲೇ ಈ ಶಾಸಕರು ರಾಜೀನಾಮೆ ನೀಡಿದ್ದರು. ನಂತರ ಬಿಜೆಪಿಗೆ ಸೇರುತ್ತಾರೆ ಎಂಬ ಮಾತುಗಳೇ ದಟ್ಟವಾಗಿ ಕೇಳಿಬರುತ್ತಿತ್ತು. ನಿರೀಕ್ಷೆಯಂತೆ ಅನರ್ಹರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದಾರೆ. ರೋಷನ್ ಬೇಗ್ ಹೊರತು ಪಡಿಸಿ ಉಳಿದೆಲ್ಲ ಅನರ್ಹ ಶಾಸಕರು ಇಂದು ಬಿಜೆಪಿಗೆ ಸೇರ್ಪಡೆಯಾಗಬೇಕಿತ್ತು. ಆದ್ರೆ ಎಂಟಿಬಿ ನಾಗರಾಜ್​​ ಗೈರಾಗಿದ್ದಾರೆ.

ಇಂದು ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಆನಂದ್ ಸಿಂಗ್, ಡಾ.ಸುಧಾಕರ್, ಬೈರತಿ ಬಸವರಾಜ್, ಎಸ್‍ಟಿ ಸೋಮಶೇಖರ್, ಮುನಿರತ್ನ ಅವರು ಬಿಎಸ್‍ವೈ, ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top