fbpx
ಸಮಾಚಾರ

ರೈಲ್ವೆ ಇಲಾಖೆಯಲ್ಲಿ 1104 ಹುದ್ದೆಗಳ ನೇಮಕಾತಿ: SSLC ಪಾಸಾದವರು ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆಯ ಈಶಾನ್ಯ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25, 2019ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:
10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇ.50% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರಬೇಕು ಮತ್ತು ಯಾವುದೇ ಟ್ರೇಡ್‌ನಲ್ಲಿ ಐಟಿಐ ಸರ್ಟಿಫಿಕೇಟ್ ಅನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕದಬಹುದು.

ಖಾಲಿ ಇರುವ ಹುದ್ದೆಗಳು:
ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್ ,ಕಾರ್ಪೆಂಟರ್, ಪೇಂಟರ್, ಮೆಕ್ಯಾನಿಕ್, ಟರ್ನರ್ ಹುದ್ದೆಗಳಿಗೆ ಅಗತ್ಯಕ್ಕೆ ತಕ್ಕಂತೆ ನೇಮಕಾತಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು.

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 15 ರಿಂದ 24 ವರ್ಷ ಹಾಗೂ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ವಿನಾಯಿತಿ ಇದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ. ಎಸ್ ಸಿ/ ಎಸ್ಟಿ, ಮಹಿಳೆ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top