fbpx
ಸಮಾಚಾರ

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆ ದಾಖಲು

ಅಧಿಕ ರಕ್ತದೊತ್ತಡದಿಂದ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಪ ಚುನಾವಣೆಯ ಪ್ರಚಾರದ ಚಟುವಟಿಕೆಗಳಲ್ಲಿ ಸಿದ್ದರಾಮಯ್ಯ ನಿರಂತರವಾಗಿ ಪ್ರಯಾಣಿಸಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಷಣಗಳನ್ನು ಮಾಡಿದ್ದರು. ಇದರಿಂದ ಅವರ ದೇಹ ಸಾಕಷ್ಟು ಬಳಲಿತ್ತು. ಉಪ ಚುನಾವಣೆಯಲ್ಲಿನ ಫಲಿತಾಂಶ ಕೂಡ ಅವರಿಗೆ ಹಿನ್ನಡೆಯುಂಟು ಮಾಡಿತ್ತು.

ಆರೋಗ್ಯ ತಪಾಸಣೆಗಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಹೋಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. 9.30ಕ್ಕೆ ಅವರು ಮನೆಗೆ ವಾಪಸಾಗಲಿದ್ದಾರೆ. ಇದು ಮಾಮೂಲಿ ಆರೋಗ್ಯ ತಪಾಸಣೆಯಾಗಿದ್ದು, ತಪಾಸಣೆ ಬಳಿಕ ಸಿದ್ದರಾಮಯ್ಯ ಅವರು ಮನೆಗೆ ವಾಪಾಸಾಗುವರು ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ “ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ.” ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top